Our Commitment For Safe And Secure Society

Our Commitment For Safe And Secure Society

This post is in Kannada language.

Visit to our new website which is launched on 15-02-2018 www.koppalpolice.in & www.koppalpolice.in/kan

Friday, July 17, 2015

ಕೊಪ್ಪಳ ಜಿಲ್ಲೆಯಲ್ಲಿ ವರದಿಯಾದ ಪ್ರಕರಣಗಳು
1) ಗಂಗಾವತಿ ಗ್ರಾಮೀಣ ಪೊಲೀಸ್ ಠಾಣಾ ಗುನ್ನೆ ನಂ. 218/2015  ಕಲಂ 78(3) Karnataka Police Act & 420 IPC.          
ದಿನಾಂಕ:-16-07-2015 ರಂದು ಸಂಜೆ 7:00 ಗಂಟೆಗೆ ಶ್ರೀ ಹನುಮರಡ್ಡೆಪ್ಪ, ಪಿ.ಎಸ್.ಐ. ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆರವರು ಕರ್ನಾಟಕ ರಾಜ್ಯ ಪೊಲೀಸ್ ಪರವಾಗಿ ಸ್ವಂತ ಫಿರ್ಯಾದಿಯನ್ನು ಸಲ್ಲಿಸಿ ಮೂಲ ಪಂಚನಾಮೆ, ಮುದ್ದೇಮಾಲು ಮತ್ತು ಆರೋಪಿಯನ್ನು ಹಾಜರಪಡಿಸಿದ್ದು, ಸದರಿ ದೂರಿನ ಸಾರಾಂಶ ಈ ಪ್ರಕಾರ ಇದೆ. " ಇಂದು ದಿನಾಂಕ:- 16-07-2015 ರಂದು ಸಂಜೆ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮದ ಸಿಂಗನಾಳ ಗ್ರಾಮದ ಕರಿಯಮ್ಮನ ಗುಡಿಯ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಮಟಕಾ ಜೂಜಾಟ ನಡೆಯುತ್ತಿದೆ ಅಂತಾ ಖಚಿತವಾದ ಮಾಹಿತಿ ಬಂದ ಮೇರೆಗೆ ಪಿ.ಸಿ. 131, 323  ಎ.ಪಿ.ಸಿ.77 ಇವರು ಮತ್ತು ಇಬ್ಬರು ಪಂಚರನ್ನು ಬರಮಾಡಿಕೊಂಡು ಮಾನ್ಯ ಸಿ.ಪಿ.ಐ. ಗಂಗಾವತಿ (ಗ್ರಾ) ವೃತ್ತ ಮತ್ತು ಡಿ.ಎಸ್.ಪಿ.ಸಾಹೇಬರು ಗಂಗಾವತಿ ಇವರ ಮಾರ್ಗದರ್ಶನದಲ್ಲಿ ಸರಕಾರಿ ಜೀಪ್ ನಂ: ಕೆ.ಎ-37/ ಜಿ-307 ನೇದ್ದರಲ್ಲಿ ಠಾಣೆಯಿಂದ ಸಂಜೆ 4:30 ಗಂಟೆಗೆ ಹೊರಟು ಸಿಂಗನಾಳ ಗ್ರಾಮದ ಊರ ಮುಂದೆ ಜೀಪನ್ನು ನಿಲ್ಲಿಸಿ ಎಲ್ಲರೂ ನಡೆದುಕೊಂಡು ಹೋಗಿ ನೋಡಲಾಗಿ ಅಲ್ಲಿ ಕರಿಯಮ್ಮನ ಗುಡಿಯ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಜನರು ಸೇರಿದ್ದು, ಅವರಲ್ಲಿ ಒಬ್ಬ ವ್ಯಕ್ತಿಯು ಕುಳಿತುಕೊಂಡು ಸಾರ್ವಜನಿಕರಿಗೆ ಮೋಸ ಮಾಡುವ ಉದ್ದೇಶದಿಂದ 1 ರೂಪಾಯಿಗೆ 80-00 ರೂಪಾಯಿ ಕೊಡುತ್ತೇನೆ, ಅದೃಷ್ಟದ ಮಟಕಾ ನಂಬರಗಳಿಗೆ ಹಣವನ್ನು ಪಣಕ್ಕೆ ಹಚ್ಚಿರಿ ಅಂತಾ ಕೂಗುತ್ತಾ ಜನರನ್ನು ಕರೆದು ಅವರಿಂದ ಹಣವನ್ನು ಪಡೆದುಕೊಂಡು ಮಟಕಾ ಅಂಕಿ ಸಂಖ್ಯೆಗಳ ಮೇಲೆ ಪಣಕ್ಕೆ ಹಚ್ಚಿಸಿಕೊಂಡು ಅವರಿಗೆ ಮಟ್ಕಾ ಚೀಟಿಗಳನ್ನು ಬರೆದುಕೊಡುತ್ತಾ, ಪಟ್ಟಿಯನ್ನು ಬರೆದುಕೊಳ್ಳುತ್ತಾ ಮೋಸ ಮಾಡುತ್ತಿದ್ದು, ಆಗ ಸಮಯ ಸಂಜೆ 5:00 ಗಂಟೆಯಾಗಿದ್ದು ಕೂಡಲೇ ಅವರ ದಾಳಿ ಮಾಡಲಾಗಿ ಮಟಕಾ ಜೂಜಾಟದಲ್ಲಿ ತೊಡಗಿದ್ದವನು ಸಿಕ್ಕಿ ಬಿದ್ದಿದ್ದು, ಉಳಿದ ಜನರು ಅಲ್ಲಿಂದ ಓಡಿ ಹೋದರು. ಸಿಕ್ಕಿಬಿದ್ದವನನ್ನು ವಿಚಾರಿಸಲಾಗಿ ಅವನು ತನ್ನ ಹೆಸರು ಕರಿಯಪ್ಪ ತಂದೆ ಹನುಮಂತಪ್ಪ ಬಸಾಪಟ್ಟಣ, ವಯಸ್ಸು 38 ವರ್ಷ, ಜಾತಿ: ಕುರುಬರು ಉ: ಕೂಲಿ ಕೆಲಸ ಸಾ: ಸಿಂಗನಾಳ. ತಾ: ಗಂಗಾವತಿ ಅಂತಾ ತಿಳಿಸಿದ್ದು, ಅವನ ಹತ್ತಿರ ಮಟಕಾ ಜೂಜಾಟದ ನಗದು ಹಣ ರೂ. 4,350/- ರೂಪಾಯಿ, ಒಂದು ಮಟಕಾ ಪಟ್ಟಿ, ಒಂದು ಬಾಲ್ ಪೆನ್ನು ದೊರೆತಿದ್ದು ಇದೆ. ನಂತರ ಅವನಿಗೆ ಮಟಕಾ ಪಟ್ಟಿಯನ್ನು ಯಾರಿಗೆ ಕೊಡುತ್ತೀಯಾ ? ಅಂತಾ ವಿಚಾರಿಸಲು ಮಟಕಾ ಪಟ್ಟಿಯನ್ನು ಶಿವರಾಜ ತಂದೆ ಗಂಗಪ್ಪ ಕುರುಬರು ಸಾ: ಸಿಂಗನಾಳ ಎಂಬುವವನಿಗೆ ಕೊಡುವುದಾಗಿ ತಿಳಿಸಿದನು. ಈ ಬಗ್ಗೆ ಸಂಜೆ 5:00 ರಿಂದ 6:00 ಗಂಟೆಯವರೆಗೆ ಸ್ಥಳದಲ್ಲಿಯೇ ಪಂಚನಾಮೆ ನಿರ್ವಹಿಸಿ ನಂತರ ಆರೋಪಿತನೊಂದಿಗೆ ಠಾಣೆಗೆ ವಾಪಸ್ ಬಂದಿದ್ದು, ಸದರಿ ಆರೋಪಿತನ ವಿರುದ್ಧ ಕಲಂ 78(iii) ಕೆ.ಪಿ. ಆ್ಯಕ್ಟ್  ಮತ್ತು 420 ಐ.ಪಿ.ಸಿ. ಅಡಿ ಪ್ರಕರಣ ದಾಖಲು ಮಾಡುವ ಕುರಿತು ವರದಿಯನ್ನು ಸಲ್ಲಿಸಿದ್ದು ಇರುತ್ತದೆ.    
2) ಕುಕನೂರ ಪೊಲೀಸ್ ಠಾಣೆ ಗುನ್ನೆ ನಂ. 82/2015  ಕಲಂ 78(3) Karnataka Police Act:.
ದಿನಾಂಕ:16-07-2015 ರಂದು 3-15 ಪಿಎಂಕ್ಕೆ ಪಿ.ಎಸ್.. ಕುಕನೂರ ಠಾಣೆರವರು ಠಾಣೆಗೆ ಹಾಜರಾಗಿ ದಾಳಿ ಪಂಚನಾಮೆ ಲಗತ್ತಿಸಿ, ಸರ್ಕಾರೀ ತರ್ಫೆ ಪಿರ್ಯಾಧಿಯನ್ನು, ಮುದ್ದೆಮಾಲು ಹಾಗೂ ವಶಕ್ಕೆ ಪಡೆದ ಒಬ್ಬ ಆರೋಪಿತನನ್ನು ಹಾಜರಪಡಿಸಿ ವರದಿ ನೀಡಿದ್ದು, ಅದರ ಸಾರಾಂಶವೇನೆಂದರೆ, ಇಂದು ಮಾಹಿತಿ ಬಂದ ಪ್ರಕಾರ ತಾವು ಇಬ್ಬರೂ ಪಂಚರ ಸಮಕ್ಷಮ ಸಿಬ್ಬಂದಿಯೊಂದಿಗೆ 1-30 ಪಿಎಂಕ್ಕೆ ತಳಕಲ್ ಗ್ರಾಮದ ಹನುಮಂತ ದೇವರ ಗುಡಿ ಹತ್ತಿರ  ಸಾರ್ವಜನಿಕ ಸ್ಥಳದಲ್ಲಿ ಮಟಕಾ ಜೂಜಾಟದಲ್ಲಿ ತೊಡಗಿದ್ದವರ ಮೇಲೆ ದಾಳಿ ಮಾಡಿ, ಮಟಕಾ ಬರೆಯುತ್ತಿದ್ದವನನ್ನು ವಶಕ್ಕೆ ಪಡೆದುಕೊಂಡು ಸದರಿಯವರ ಅಂಗಜಡ್ತಿಯಿಂದ 1200-00 ರೂ., 1 ಮಟಕಾ ನಂಬರ್ ಬರೆದ ಚೀಟಿ, 1 ಬಾಲ್ ಪೆನ್ ಇವುಗಳನ್ನು ಜಪ್ತ ಪಡಿಸಿಕೊಂಡಿದ್ದು, ಬಗ್ಗೆ ಮಟಕಾ ಜೂಜಾಟದ ದಾಳಿ ಪಂಚನಾಮೆಯನ್ನು ಪೂರೈಸಿಕೊಂಡು ಬಂದಿದ್ದು, ಕಾರಣ, ಸದರಿಯವರ ಮೇಲೆ ಕಾನೂನು ರೀತಿಯ ಕ್ರಮ ಜರುಗಿಸಲು ಸೂಚಿಸಿದೆ ಅಂತಾ ಮುಂತಾಗಿ ನೀಡಿದ ದೂರಿನ ಸಾರಾಂಶದ ಮೇಲಿಂದ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಕೊಂಡೆನು.
3) ಕುಕನೂರ ಪೊಲೀಸ್ ಠಾಣೆ ಗುನ್ನೆ ನಂ. 83/2015  ಕಲಂ 87 Karnataka Police Act:.

ಇಂದು ದಿನಾಂಕ:16-07-2015 ರಂದು 5-00 ಪಿಎಂಕ್ಕೆ ಪಿ.ಎಸ್.. ಕುಕನೂರ ಠಾಣೆರವರು ಠಾಣೆಗೆ ಹಾಜರಾಗಿ ದಾಳಿ ಪಂಚನಾಮೆ ಲಗತ್ತಿಸಿ, ಸರ್ಕಾರೀ ತರ್ಫೆ ಪಿರ್ಯಾದಿಯನ್ನು ಮುದ್ದೆಮಾಲು ಹಾಗೂ ವಶಕ್ಕೆ ಪಡೆದ 7 ಜನ ಆರೋಪಿತರನ್ನು ಹಾಜರಪಡಿಸಿ ನೀಡಿದ್ದು, ಅದರ ಸಾರಾಂಶವೇನೆಂದರೆ, ಇಂದು ಮಾಹಿತಿ ಬಂದ ಪ್ರಕಾರ ತಾವು ಮಾನ್ಯ ಸಿಪಿಐ ಯಲಬುರ್ಗಾರವರ ಮಾರ್ಗದರ್ಶನದಲ್ಲಿ ಇಬ್ಬರೂ ಪಂಚರ ಸಮಕ್ಷಮ ಸಿಬ್ಬಂದಿಯೊಂದಿಗೆ 3-45 ಪಿಎಂಕ್ಕೆ ತೊಂಡಿಹಾಳ ಗ್ರಾಮದ ಶರಣಬಸವೇಶ್ವರ ಗುಡಿಯ ಮುಂದಿನ ಬಯಲು ಜಾಗೆಯಲ್ಲಿ ಜೂಜಾಟದಲ್ಲಿ ತೊಡಗಿದ್ದವರ ಮೇಲೆ ಪಂಚರ ಸಮಕ್ಷಮ ದಾಳಿ ಮಾಡಿ, ಸದರಿಯವರನ್ನು ವಶಕ್ಕೆ ಪಡೆದುಕೊಂಡು ಸದರಿಯವರಿಂದ ಹಾಗೂ ಜೂಜಾಟದ ಕಣದಿಂದ ಒಂದು ಪ್ಲಾಸ್ಟಿಕ್ ಬರಕಾ 52 ಇಸ್ಪೀಟ್ ಎಲೆಗಳು ಹಾಗೂ ಜೂಜಾಟದ ನಗದು ಹಣ 2400-00 ರೂ.ಗಳನ್ನು ಜಪ್ತ ಪಡಿಸಿಕೊಂಡಿದ್ದು, ಬಗ್ಗೆ ಇಸ್ಪೀಟ್ ಜೂಜಾಟದ ದಾಳಿ ಪಂಚನಾಮೆಯನ್ನು ಪೂರೈಸಿಕೊಂಡು ಬಂದಿದ್ದು, ಕಾರಣ, ಸದರಿಯವರ ಮೇಲೆ ಕಾನೂನು ರೀತಿಯ ಕ್ರಮ ಜರುಗಿಸಲು ಸೂಚಿಸಿದೆ ಅಂತಾ ಮುಂತಾಗಿ ನೀಡಿದ ದೂರಿನ ಸಾರಾಂಶದ ಮೇಲಿಂದ ಕುಕನೂರ ಪೊಲೀಸ್ ಠಾಣಾ ಗುನ್ನೆ ನಂ:83/2015 ಕಲಂ:87 ಕೆ.ಪಿ. ಅಕ್ಟ್ ಅನ್ವಯ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಕೊಂಡೆನು

0 comments:

 
Will Smith Visitors
Since 01/02/2008