Our Commitment For Safe And Secure Society

Our Commitment For Safe And Secure Society

This post is in Kannada language.

Visit to our new website which is launched on 15-02-2018 www.koppalpolice.in & www.koppalpolice.in/kan

Thursday, February 25, 2016

1) ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆ ಗುನ್ನೆ ನಂ. 88/2016 ಕಲಂ: 78(3) Karnataka Police Act.
ದಿನಾಂಕ: 24-02-2016 ರಂದು ರಾತ್ರಿ 7:30 ಗಂಟೆಗೆ ಶ್ರೀ ಆಂಜನೇಯ,ಡಿ.ಎಸ್. ಪಿ.ಎಸ್.ಐ. ಗಂಗಾವತಿ ಸಂಚಾರಿ ಪೊಲೀಸ್ ಠಾಣೆ ಇವರು ಒಬ್ಬ ಆರೋಪಿತನೊಂದಿಗೆ ಮೂಲ ಪಂಚನಾಮೆ, ಮುದ್ದೆಮಾಲು ಹಾಗೂ ವರದಿಯನ್ನು ಸಲ್ಲಿಸಿದ್ದು ಅದರ ಸಾರಾಂಶ ಈ ಪ್ರಕಾರ ಇದೆ.  ಇಂದು ದಿನಾಂಕ:- 24-02-2016 ರಂದು ಸಂಜೆ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ  ಸಂಗಾಪೂರು ಗ್ರಾಮದಲ್ಲಿ ಬಸ್ ನಿಲ್ದಾಣದ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಮಟಕಾ ಜೂಜಾಟ ನಡೆಯುತ್ತಿದೆ  ಅಂತಾ ಖಚಿತವಾದ ಮಾಹಿತಿ ಬಂದ ಮೇರೆಗೆ ಮಾನ್ಯ ಡಿ.ಎಸ್.ಪಿ. ಗಂಗಾವತಿರವರ ಮಾರ್ಗದರ್ಶನದಂತೆ ಪಿ.ಸಿ. 131, 65 ಎ.ಪಿ.ಸಿ. 110 ಭಾಸ್ಕರ ಹಾಗೂ ಇಬ್ಬರು ಪಂಚರನ್ನು ಬರಮಾಡಿಕೊಂಡು ಸರಕಾರಿ ಜೀಪ್ ನಂ: ಕೆ.ಎ-37/ ಜಿ-262 ನೇದ್ದರಲ್ಲಿ ಸಂಜೆ 5:30 ಗಂಟೆಗೆ ಹೊರಟು ಸಂಗಾಪೂರು ಗ್ರಾಮದ ಊರ ಮುಂದೆ ಹೋಗಿ ವಾಹನವನ್ನು ನಿಲ್ಲಿಸಿ ಎಲ್ಲರೂ ನಡೆದುಕೊಂಡು ಹೋಗಿ ನೋಡಲಾಗಿ ಬಸ್ ನಿಲ್ದಾಣದ ಮುಂಭಾಗದ ಸಾರ್ವಜನಿಕ ಸ್ಥಳದಲ್ಲಿ ಜನರು ಸೇರಿದ್ದು, ಅವರಲ್ಲಿ ಒಬ್ಬ ವ್ಯಕ್ತಿಯು ಕುಳಿತುಕೊಂಡು ಸಾರ್ವಜನಿಕರಿಗೆ 1-00 ರೂಪಾಯಿಗೆ 80-00 ರೂಪಾಯಿ ಕೊಡುತ್ತೇನೆ, ಅದೃಷ್ಟದ ಮಟಕಾ ನಂಬರ್ಗಳಿಗೆ ಹಣವನ್ನು ಪಣಕ್ಕೆ ಹಚ್ಚಿರಿ ಅಂತಾ ಕೂಗುತ್ತಾ ಜನರನ್ನು ಕರೆದು ಅವರಿಂದ ಹಣವನ್ನು ಪಡೆದುಕೊಂಡು ಮಟಕಾ ಅಂಕಿ ಸಂಖ್ಯೆಗಳ ಮೇಲೆ ಪಣಕ್ಕೆ ಹಚ್ಚಿಸಿಕೊಂಡು ಅವರಿಗೆ ಮಟ್ಕಾ ಚೀಟಿಗಳನ್ನು ಬರೆದುಕೊಡುತ್ತಾ, ಪಟ್ಟಿಯನ್ನು ಬರೆದುಕೊಳ್ಳುತ್ತಾ ಮಟಕಾ ಜೂಜಾಟದಲ್ಲಿ ತೊಡಗಿದ್ದು, ಆಗ ಸಮಯ ಸಂಜೆ 6:00 ಗಂಟೆಯಾಗಿದ್ದು ಕೂಡಲೇ ಅವರ ದಾಳಿ ಮಾಡಲಾಗಿ ಮಟಕಾ ಜೂಜಾಟದಲ್ಲಿ ತೊಡಗಿದ್ದವನು ಸಿಕ್ಕಿ ಬಿದ್ದಿದ್ದು, ಉಳಿದ ಜನರು ಅಲ್ಲಿಂದ ಓಡಿ ಹೋದರು. ಸಿಕ್ಕಿಬಿದ್ದವನನ್ನು ವಿಚಾರಿಸಲಾಗಿ ಅವನು ತನ್ನ ಹೆಸರು ಖಾಸೀಂಸಾಬ ತಂದೆ ನಬೀಸಾಬ, ವಯಸ್ಸು 60 ವರ್ಷ, ಜಾತಿ: ಮುಸ್ಲೀಂ ಸಾ: ಸಂಗಾಪೂರು. ತಾ: ಗಂಗಾವತಿ ಅಂತಾ ತಿಳಿಸಿದ್ದು, ಅವನ ಹತ್ತಿರ ಮಟಕಾ ಜೂಜಾಟದ ನಗದು ಹಣ ರೂ. 670/- ರೂಪಾಯಿ, ಒಂದು ಮಟಕಾ ಪಟ್ಟಿ, ಒಂದು ಬಾಲ್ ಪೆನ್ನು ದೊರೆತಿದ್ದು ಇದೆ. ನಂತರ ಅವನಿಗೆ ಮಟಕಾ ಪಟ್ಟಿಯನ್ನು ಯಾರಿಗೆ ಕೊಡುತ್ತೀಯಾ ? ಅಂತಾ ವಿಚಾರಿಸಲು ಅವನು ತನ್ನ ಮಟಕಾ ಪಟ್ಟಿಯನ್ನು ಹಸನ್ಸಾಬ ತಂದೆ ಸತ್ತಾರಸಾಬ ಸಾ: ಗಂಗಾವತಿ ಎಂಬುವವನಿಗೆ ಕೊಡುವುದಾಗಿ ತಿಳಿಸಿದನು. ಈ ಬಗ್ಗೆ ಸಂಜೆ 6:00 ರಿಂದ 7:00 ಗಂಟೆಯವರೆಗೆ ಸ್ಥಳದಲ್ಲಿಯೇ ಪಂಚನಾಮೆ ನಿರ್ವಹಿಸಿ ನಂತರ ಆರೋಪಿತನೊಂದಿಗೆ ಠಾಣೆಗೆ ವಾಪಸ್ ಬಂದಿದ್ದು, ಸದರಿ ಆರೋಪಿತನ ವಿರುದ್ಧ ಕಲಂ 78(iii) ಕೆ.ಪಿ. ಆ್ಯಕ್ಟ್ ಅಡಿಯಲ್ಲಿ ಪ್ರಕರಣ ದಾಖಲು ಮಾಡುವ ಕುರಿತು ವರದಿಯನ್ನು ಸಲ್ಲಿಸಿದ್ದು ಇರುತ್ತದೆ." ಅಂತಾ ಸಾರಾಂಶ ಇದ್ದು ಸದರಿ ಅಪರಾಧವು ಅಸಂಜ್ಞೆಯ ಅಪರಾಧವಾಗಿದ್ದು, ಕಾರಣ ಪ್ರಕರಣ ದಾಖಲು ಮಾಡಿ ತನಿಖೆ ಕೈಗೊಳ್ಳಲು ಮಾನ್ಯ ನ್ಯಾಯಾಲಯದಿಂದ ಪರವಾನಿಗೆ ಪಡೆದುಕೊಂಡು ಪ್ರಕರಣ ದಾಖಲು ಮಾಡಿ ತನಿಖೆ ಕೈಗೊಂಡಿದ್ದು ಇರುತ್ತದೆ.
2) ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆ ಗುನ್ನೆ ನಂ. 53/2016 ಕಲಂ. 87 Karnataka Police Act.
ದಿ:24.02.16 ರಂದು  ಸಂಜೆ 5.30 ಗಂಟೆಯ ಸುಮಾರಿಗೆ ಕೊಪ್ಪಳ ಗ್ರಾಮೀಣ ಪೊಲೀಸ ಠಾಣಾ ವ್ಯಾಪ್ತಿಯ ವದಗನಾಳ ಗ್ರಾದ ಸಿದ್ದಪ್ಪ ಪರನಗೌಡ್ರ ಇವರ ಹೋಟೇಲ್ ಪಕ್ಕ ಸಾರ್ವಜನಿಕ ಸ್ಥಳದಲ್ಲಿ 20 ಜನ ಆರೋಪಿತರು ದುಂಡಾಗಿ ಕುಳಿತು ಪಣಕ್ಕೆ ಹಣವನ್ನು ಹಚ್ಚಿ ಅಂದರ-ಬಾಹರ ಎಂಬ ಇಸ್ಪೇಟ್ ಜೂಜಾಟದಲ್ಲಿ ತೊಡಗಿದ್ದಾಗ ಅಧಿಕಾರಿ ಹಾಗೂ ಸಿಬ್ಬಂದಿಯವರು ಪಂಚರ ಸಮಕ್ಷಮ ದಾಳಿ ಮಾಡಿ ಜೂಜಾಟಕ್ಕೆ ಉಪಯೋಗಿಸಿದ ನಗದು ಹಣ 3460=00 ರೂ ನಗದುಹಣ ಮತ್ತು 52 ಇಸ್ಪೇಟ್ ಎಲೆಗಳನ್ನು ಹಾಗೂ ಒಂದು ಹಾಳೆಯ ಚೀಲ ಇವುಗಳನ್ನು ಪಂಚರ ಸಮಕ್ಷಮ ಜಪ್ತ ಮಾಡಿಕೊಂಡಿದ್ದು 20 ಜನ ಆರೋಪಿತರನ್ನು ವಶಕ್ಕೆ ತೆಗೆದುಕೊಂಡು ಹೀಗೆ ಸದರಿ ಆರೋಪಿತರ ವಿರುದ್ದ ಕಾನೂನು ಕ್ರಮ ಜರುಗಿಸಿದ್ದು ಇರುತ್ತದೆ.


0 comments:

 
Will Smith Visitors
Since 01/02/2008