Our Commitment For Safe And Secure Society

Our Commitment For Safe And Secure Society

This post is in Kannada language.

Visit to our new website which is launched on 15-02-2018 www.koppalpolice.in & www.koppalpolice.in/kan

Tuesday, September 6, 2016

1] ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆ ಗುನ್ನೆ ನಂ: 257/2016 ಕಲಂ: 87 Karnataka Police Act.
ದಿನಾಂಕ:- 05-09-2016 ರಂದು ಮಧ್ಯಾಹ್ನ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಹೊಸಳ್ಳಿ ಗ್ರಾಮದ ಶ್ರೀ ಆಂಜನೇಯ ಗುಡಿಯ ಮುಂಭಾಗದ ಸಾರ್ವಜನಿಕ ಸ್ಥಳದಲ್ಲಿ ಅಂದಾರ ಬಹಾರ ಎಂಬ ಅದೃಷದ ಇಸ್ಪೀಟ್ ಜೂಜಾಟದ ನಡೆಯುತ್ತಿದೆ ಅಂತಾ ಖಚಿತವಾದ ಭಾತ್ಮಿ ಮೇರೆಗೆ ಶ್ರೀ ಪ್ರಕಾಶ ಮಾಳಿ, ಪಿ.ಎಸ್.ಐ. ಹಾಗೂ ಸಿಬ್ಬಂದಿಯವರಾದ 120, 429, 363, 323, 358, 110, 277 ಎ.ಪಿ.ಸಿ. 77 ರವರು ಮತ್ತು ಇಬ್ಬರು ಪಂಚರನ್ನು ಬರಮಾಡಿಕೊಂಡು ನಮಗೆ ಮಾಹಿತಿ ಇದ್ದ ಸ್ಥಳದಿಂದ ಸ್ವಲ್ಪ ದೂರದಲ್ಲಿ ನಿಂತು ನೋಡಲು ಹೊಸಳ್ಳೀ ಗ್ರಾಮದ ಶ್ರೀ ಆಂಜನೇಯ ಗುಡಿಯ ಮುಂಭಾಗದ ಸಾರ್ವಜನಿಕ ಸ್ಥಳದಲ್ಲಿ ಜನರು ದುಂಡಾಗಿ ಕುಳಿತುಕೊಂಡು ಹಣವನ್ನು ಪಣಕ್ಕೆ ಹಚ್ಚಿ ಇಸ್ಪೇಟ್ ಎಲೆಗಳಿಂದ ಅಂದರ್ ಬಹಾರ್ ಎನ್ನುವ ಕಾನೂನು ಬಾಹಿರವಾದ ಅದೃಷ್ಠದ ಇಸ್ಪೇಟ್ ಜೂಜಾಟದಲ್ಲಿ ತೊಡಗಿದ್ದು ಕಂಡುಬಂದಿದ್ದು, ಕೂಡಲೇ ಅವರ ಮೇಲೆ ದಾಳಿ ಮಾಡಲಾಗಿ ಜೂಜಾಟದಲ್ಲಿ ತೊಡಗಿದ್ದ (1) ಪಂಪಣ್ಣ ತಂದೆ ನಾಗಪ್ಪ ಹೊಸಳ್ಳಿ, ವಯಸ್ಸು 40 ವರ್ಷ, ಜಾತಿ: ಲಿಂಗಾಯತ ಉ: ಒಕ್ಕಲುತನ ಸಾ: ಹೊಸಳ್ಳಿ ಹಾಗೂ ಇತರೆ  16 ಜನರು ಸಿಕ್ಕಿಬಿದ್ದಿದ್ದು. ಸಿಕ್ಕವರಿಂದ ಹಾಗೂ ಸ್ಥಳದಿಂದ ಜೂಜಾಟದ ನಗದು ಹಣ ರೂ. 14,850/- ರೂಪಾಯಿ, 52 ಇಸ್ಪೀಟ್ ಎಲೆಗಳು, ಹಾಗೂ ನೆಲದ ಮೇಲೆ ಹಾಸಿದ್ದ ಒಂದು ಪ್ಲಾಸ್ಟಿಕ್ ಬರಕಾ ಸಿಕ್ಕಿದ್ದು, ಪ್ರಕರಣ ದಾಖಲು ಮಾಡಿ ತನಿಖೆ ಕೈಗೊಂಡಿದ್ದು ಇರುತ್ತದೆ.
2] ಕುಕನೂರ ಪೊಲೀಸ್ ಠಾಣೆ ಗುನ್ನೆ ನಂ: 98/2016 ಕಲಂ: 87 Karnataka Police Act.
ಪಿ.ಎಸ್.ಐ. ಕುಕನೂರ ರವರಿಗೆ ಜೂಜಾಟದ ಮಾಹಿತಿ ಬಂದ ಪ್ರಕಾರ ಇಬ್ಬರೂ ಪಂಚರ ಸಮಕ್ಷಮ ಸಿಬ್ಬಂದಿಯೊಂದಿಗೆ 9-45 ಪಿಎಂಕ್ಕೆ ಬನ್ನಿಕೊಪ್ಪ ಗ್ರಾಮದ ಶ್ರೀ ತೋಂಟದಾರ್ಯ ಮಠದ ಮುಂದಿನ ಬಯಲು ಜಾಗೇಯಲ್ಲಿ  ಸಾರ್ವಜನಿಕ ಸ್ಥಳದಲ್ಲಿ ಜೂಜಾಟದಲ್ಲಿ ತೊಡಗಿದ್ದವರ ಮೇಲೆ ದಾಳಿ ಮಾಡಿ, ಸದರಿ ಆರೋಪಿತರನ್ನು ವಶಕ್ಕೆ ಪಡೆದುಕೊಂಡಿದ್ದು, ಸಿಕ್ಕಿಬಿದ್ದವರಿಂದ ಹಾಗೂ ಜೂಜಾಟದ ಕಣದಿಂದ ಒಂದು ಬರಕಾ, 52 ಇಸ್ಪೀಟ್ ಎಲೆಗಳು ಹಾಗೂ ಜೂಜಾಟದ ನಗದು ಹಣ 17,450/- ರೂ.ಗಳನ್ನು ಜಪ್ತ ಪಡಿಸಿಕೊಂಡಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಕೊಂಡಿದ್ದು ಇರುತ್ತದೆ.
3] ಕುಕನೂರ ಪೊಲೀಸ್ ಠಾಣೆ ಗುನ್ನೆ ನಂ: 99/2016 ಕಲಂ: 87 Karnataka Police Act.
ದಿನಾಂಕ: 05-09-2016 ರಂದು 11-30 ಪಿಎಂಕ್ಕೆ ಸಿ.ಪಿ.. ಯಲಬುರ್ಗಾ ವೃತ್ತರವರು ಠಾಣೆಗೆ ಹಾಜರಾಗಿ ದಾಳಿ ಪಂಚನಾಮೆ ಲಗತ್ತಿಸಿ, ಸರ್ಕಾರೀ ತರ್ಫೆ ಪಿರ್ಯಾದಿಯನ್ನು, ಮುದ್ದೆಮಾಲು ಹಾಗೂ ವಶಕ್ಕೆ ಪಡೆದ 16 ಜನ ಆರೋಪಿತರನ್ನು ಹಾಜರಪಡಿಸಿ ವರದಿ ನೀಡಿದ್ದು, ಜೂಜಾಟದ ಮಾಹಿತಿ ಬಂದ ಪ್ರಕಾರ ತಾವು ಇಬ್ಬರೂ ಪಂಚರ ಸಮಕ್ಷಮ ಸಿಬ್ಬಂದಿಯೊಂದಿಗೆ 10-00 ಪಿಎಂಕ್ಕೆ ಬನ್ನಿಕೊಪ್ಪ ಗ್ರಾಮದ ಬಸವಣ್ಣ ದೇವಸ್ಥಾನದ ಮುಂದಿನ ಸಾರ್ವಜನಿಕ ಸ್ಥಳದಲ್ಲಿ ಜೂಜಾಟದಲ್ಲಿ ತೊಡಗಿದ್ದವರ ಮೇಲೆ ದಾಳಿ ಮಾಡಿ, ಸದರಿ ಆರೋಪಿತರನ್ನು ವಶಕ್ಕೆ ಪಡೆದುಕೊಂಡಿದ್ದು, ಸಿಕ್ಕಿಬಿದ್ದವರಿಂದ ಹಾಗೂ ಜೂಜಾಟದ ಕಣದಿಂದ ಒಂದು ಬರಕಾ, 52 ಇಸ್ಪೀಟ್ ಎಲೆಗಳು ಹಾಗೂ ಜೂಜಾಟದ ನಗದು ಹಣ 19,450/- ರೂ.ಗಳನ್ನು ಜಪ್ತ ಪಡಿಸಿಕೊಂಡಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಕೊಂಡಿದ್ದು ಇರುತ್ತದೆ.


0 comments:

 
Will Smith Visitors
Since 01/02/2008